ಕೊನೆಗೂ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.
ಕೊನೆಗೂ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪುಟ ಸಚಿವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು, ನವೆಂಬರ್ 17 ರಿಂದ ಕಾಲೇಜು ಆರಂಭಿಸಲು ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಮತ್ತು ಡಿಸಿಎಂ ಆಗಿರುವ ಡಾ.ಅಶ್ವತ್ಥ ನಾರಾಯಣ, ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕೋ’ವಿಡ್ ನಿಯಮ ಮತ್ತು ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೊದಲಿಗೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಟ್ಟು ಪಠ್ಯದಲ್ಲಿ 33 ಶೇಕಡಾದಷ್ಟು ಪಠ್ಯವನ್ನು ಕಡಿತ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಪ್ರಥಮ ಮತ್ತು ದ್ವಿತೀಯ ಪಿಯು ವಿಭಾಗದಲ್ಲಿ ವಿಜ್ಞಾನ ವಿಭಾಗದ ಫಿಸಿಕ್ಸ್ , ಕೆಮಿಸ್ಟ್ರಿ ಮತ್ತು ಗಣಿತ ಶಾಸ್ತ್ರ ವಿಷಯದಲ್ಲಿ ಪಠ್ಯ ಕಡಿತ ಮಾಡುವುದು ಬೇಡ ಎಂದು ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರು ಪ್ರಸ್ತಾಪ ಇಟ್ಟಿದ್ದಾರೆ.
ಕಾಲೇಜು ಆರಂಭ ವಿಚಾರದಲ್ಲಿ ಯಾವೆಲ್ಲ ಸೂಚನೆ ಪಾಲಿಸಬೇಕು ಮತ್ತು ಕಲಿಕಾ ಪಠ್ಯಗಳ ಬಗ್ಗೆ ಇನ್ನೆರಡು ದಿನದಲ್ಲಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. ಏಳು ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾರ್ಚ್ 22 ರಂದು ಲಾಕ್ಡೌನ್ ಘೋಷಣೆಯಾದ ಬಳಿಕ ಶಾಲೆ, ಕಾಲೇಜುಗಳು ಸ್ಥಗಿತಗೊಂಡಿದ್ದವು. ಆನಂತರ ಕೆಲವು ವಿಭಾಗದ ಪರೀಕ್ಷೆಗಳನ್ನೂ ಅರ್ಧಕ್ಕೆ ಕಡಿತಗೊಳಿಸಲಾಗಿತ್ತು. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳೆದ ತಿಂಗಳಷ್ಟೇ ಅಂತಿಮ ಪರೀಕ್ಷೆಗಳನ್ನು ಪೂರ್ತಿ ಮಾಡಲಾಗಿತ್ತು.
ಈಗ ಕಾಲೇಜುಗಳಲ್ಲಿ ಅಡ್ಮಿಶನ್ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲಿಗೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವೆಂಬರ್ ತಿಂಗಳಾಂತ್ಯಕ್ಕೆ ಡಿಸೆಂಬರ್ ನಲ್ಲಿ ಪಿಯು ಮತ್ತು ಪ್ರೌಢಶಾಲೆ ಆರಂಭಗೊಳ್ಳುವ ಸಾಧ್ಯತೆಯಿದೆ. ಈ ಮಾಹಿತಿಯನ್ನು ಎಲ್ಲರೊಟ್ಟಿಗೆ ಹಂಚಿಕೊಳ್ಳಿ. ಹಾಗೂ ನಿಮ್ಮ ಮಕ್ಕಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಿ.