ಸಾಮಾಜಿಕ ಜಾಲತಾಣದಲ್ಲಿ ತಮಗಾದ ಅನ್ಯಾಯವನ್ನು ತೋಡಿಕೊಂಡ ಕೃತಿಕಾ ರವೀಂದ್ರ.
ಸಾಮಾಜಿಕ ಜಾಲತಾಣದಲ್ಲಿ ತಮಗಾದ ಅನ್ಯಾಯವನ್ನು ತೋಡಿಕೊಂಡ ಕೃತಿಕಾ ರವೀಂದ್ರ ಹೀಗೆ ಹೇಳಿದ್ದಾರೆ ನೋಡಿ.ಇದೇನ ಸಭ್ಯತೆ, ಇದೇನ ಸಂಸ್ಕೃತಿ. ಇದನ್ನು ನಾವೆಲ್ಲರೂ ಹಲವಾರು ಬಾರಿ ಕೇಳಿರುತ್ತೇವೆ. ಇತ್ತೀಚೆಗೆ ಒಂದು ಕರೆ ಬಂದಿತ್ತು. ಒಂದು ಸಿನೆಮಾ ಮಾತುಕತೆ. ಅದ್ಭುತ ಕಥೆ ಅಲ್ಲದಿದ್ದರೂ ಮಾಡಲಸಾಧ್ಯ ಅನ್ನಿಸುವಂಥದ್ದಲ್ಲ. ನಾನು ಗಮನಿಸಿರುವ ಹಾಗೆ,ಸಂಭಾವನೆ ಕಥೆಗಿಂತ ಮುಖ್ಯ ಎಂಬುವುದು ವಿಷಾದಕರ ಸಂಗತಿ. ಇಲ್ಲಿಯೂ ಸಂಭಾವನೆಯ ವಿಷಯ ಬಂದಾಗ ನಾನು ಸುತ್ತಿ ಬಳಸಿ ಮಾತನಾಡದೇ ನೇರವಾಗಿ ಇಷ್ಟು ಕೊಟ್ಟರೆ ಸಂತೋಷ.
ಆಗಲಿಲ್ಲ ಅಂದ್ರೆ ನಿಮ್ಮ ಬಡ್ಜೆಟ್ ಹೇಳಿ. ಇಬ್ಬರಿಗೂ ಹೊಂದಿಕೆಯಾದಲ್ಲಿ ಮುಂದುವರಿಯೋಣ ಅಂದೆ. ೨ ದಿನ ಬಿಟ್ಟು ಕರೆ ಬಂತು. ಅವರು ಹೇಳಿದ ಸಂಭಾವನೆ ನನಗೆ ಹೊಂದಿಕೆಯಾಗದಿದ್ದರಿಂದ ಕ್ಷಮಿಸಿ, ಇಷ್ಟು ಸಂಭಾವನೆಗೆ ಕೆಲಸ ಮಾಡೋದಕ್ಕೆ ನಂಗೆ ಕಷ್ಟ ಆಗತ್ತೆ ಅOದೆ. ವಿಷಯ ಇದಲ್ಲ. ನನ್ನ ನೇರ ನುಡಿಯಿಂದ ಮುಖಭಂಗಗೊಂಡ ಆಸಾಮಿ ಮಾತನ್ನ ಅಷ್ಟಕ್ಕೇ ನಿಲ್ಲಿಸದೇ ನಾನು ನನ್ನ ಸಿನೆಮಾಗಳಿಗೆ ಬಾಂಬೆಯಿಂದಲೇ ಹೀರೋಯಿನ್ ಗಳನ್ನ ಕರೆಸೋದು.
ತುಂಬಾ ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ. ಕನ್ನಡದವರನ್ನ ನನ್ನ ಸಿನೆಮಾಗಳಿಗೆ ತಗೊಳಲ್ಲ ಅಂದ. ನಾನು ಒಹ್ ತಾವು ಕನ್ನಡದವರನ್ನೇ ತಗೋಳಲ್ವ ಹೆಂಗೆ ಸರ್. ಕನ್ನಡದವರಾಗಿ ಕನ್ನಡದವರಿಗೆ ಅವಕಾಶಗಳನ್ನ ಕೊಡಲ್ವಾ ಅಂದೆ. ಆಸಾಮಿ ಅಯ್ಯೋ ಹಾಗಲ್ಲ ಮೇಡಂ. ಅಷ್ಟು ಕಡಿಮೆಗೆ ಅಲ್ಲಿಂದ ಬಂದು ಕೆಲಸ ಮಾಡಿ ಹೋಗ್ತಾರೆ ಅಂದ. ಹಾಗಾಗಿ , ಬಾಂಬೆ ಇಂದ ಹೀರೋಯಿನ್ಗಳನ್ನ ಕರೆಸೋದು, ಇಲ್ಲಿಯವರನ್ನ ಗಣನೆಗೆ ತಗೊಳ್ದೆ ಇರೋದು ಇದೇಲ್ಲಕ್ಕೂ ಸಂಭಾವನೆ ಕಾರಣ.
ನಾನು ತುಂಬಾ ಕಡಿಮೆ ಸಂಭಾವನೆಗೆ ಕೆಲಸ ಮಾಡಿದೀನಿ ಗೆಳೆಯರೇ. ಸಂಭಾವನೆೇನೇ ತಗೊಳ್ದೆ ಕೂಡ ಮಾಡಿದೀನಿ. ಇನ್ನು ವಿಪರ್ಯಾಸ ಅಂದ್ರೆ ಇನ್ನು ಸಂಭಾವನೆ ಸಿಗದೇ ಮೋಸ ಕೂಡ ಹೋಗಿದೀನಿ. ಇವೆಲ್ಲಾ ನಂಗೆ ಒಳ್ಳೆ ಅನುಭವಗಳನ್ನ ಕೊಟ್ಟಿದೆ. (ಕೊಡ್ತಾ ಇದೆ) ಆದ್ರೆ ನನ್ನ ಪ್ರಶ್ನೆ, ಕಡಿಮೆ ಸಂಭಾವನೆಗೆ ಬಾರೋ ಕನ್ನಡದವರನ್ನೇ ಬೆಳೆಸಿ.
ಅವಕಾಶಗಳನ್ನ ಕೊಡಿ. ಬಾಂಬೆ, ಅಲ್ಲಿ- ಇಲ್ಲಿ ಇರೋ ಹುಡುಗಿಯರನ್ನೇ ನೀವಾಳಿಸಿ ಬಿಸಾಕೋ ಅಂಥ ಅದ್ಭುತ ಪ್ರತಿಭೆಗಳು ನಮ್ಮ ಕನ್ನಡದಲ್ಲಿದ್ದಾರೆ. ಒಂದು ಚಿಕ್ಕ ಅವಕಾಶ ಬಹುಷಃ ಅವರ ಜೀವನವನ್ನೇ ಬದಲಾಯಿಸಬಹುದು. ಅನ್ಯಾಯ ಮಾಡಬೇಡಿ ಅಷ್ಟೇ. ನನಗೂ ಕೂಡ. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.